ರಾಜ್ಯ

ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ

ಡಿಸಿಎಂ ಅವರಿಗೆ ಸಲ್ಲಿಸಿದ್ದ ಮನವಿಯಲ್ಲಿ, "2017 ರಲ್ಲಿ ಎನ್ ಎಚ್ ಯುಎಂ ವತಿಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರನ್ನು ಘನತ್ಯಾಜ್ಯ ನಿರ್ವಹಣಾ ವಿಭಾಗಕ್ಕೆ ವರ್ಗವಣೆ ಮಾಡಲಾಯಿತು.

ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ
"Cauvery drinking water to 250 villages of Kanakapura taluk": Karnataka Dy CM DK Shivakumar
Published On :

ಬೆಂಗಳೂರು: "ಬಿಬಿಎಂಪಿ ಆರೋಗ್ಯ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು.

ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದರು.

"ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು" ಎಂದು ಹೇಳಿದರು.

"ಬಿಬಿಎಂಪಿ ಗುತ್ತಿಗೆದಾರರಿಂದ ನಿಮಗೆ ವೇತನ ಪಾವತಿ ಆಗುವುದಿಲ್ಲ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯನ್ನು (ಬಿಎಸ್ಡಬ್ಲ್ಯೂಎಂಎನ್) ಬೆಂಗಳೂರು ನಗರದ ಕಸ ನಿರ್ವಹಣೆಗೆಂದು ಸ್ಥಾಪಿಸಲಾಗಿದೆ. ಇದನ್ನು ಗುತ್ತಿಗೆದಾರರು ನಿರ್ವಹಣೆ ಮಾಡುವುದಿಲ್ಲ. ಇದರ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೇ ಇರುತ್ತಾರೆ" ಎಂದು ಹೇಳಿದರು.

ಡಿಸಿಎಂ ಅವರಿಗೆ ಸಲ್ಲಿಸಿದ್ದ ಮನವಿಯಲ್ಲಿ, "2017 ರಲ್ಲಿ ಎನ್ ಎಚ್ ಯುಎಂ ವತಿಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರನ್ನು ಘನತ್ಯಾಜ್ಯ ನಿರ್ವಹಣಾ ವಿಭಾಗಕ್ಕೆ ವರ್ಗವಣೆ ಮಾಡಲಾಯಿತು. ಈಗ ಬಿ.ಎಸ್.ಡಬ್ಲ್ಯೂ.ಎಂ.ಎನ್ ಕಡೆಯಿಂದ ವೇತನ ಪಾವತಿ ಎಂದು ತಿಳಿಸಿರುತ್ತಾರೆ. ಕಳೆದ‌ 30 ವರ್ಷಗಳಿಂದ ಪಾಲಿಕೆಯಲ್ಲಿ‌ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ಬಿಬಿಎಂಪಿಯಿಂದಲೇ ವೇತನ‌ ಪಾವತಿ ವ್ಯವಸ್ಥೆ ಮಾಡಬೇಕು ಎಂದು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.