'ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್ಗಳಿಗೆ ವಿದೇಶದಿಂದ ಹಣ': ಕೇಂದ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪತ್ರ, ED ತನಿಖೆಗೆ ಆಗ್ರಹ
ಎಡಪಂಥೀಯ ಗುಂಪುಗಳ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಸಹ ಹೇಳಿದ್ದಾರೆ.

ಉಡುಪಿ: ಧರ್ಮಸ್ಥಳ ಅಪಪ್ರಚಾರಕ್ಕೆ ಯೂಟ್ಯೂಬರ್ ಮತ್ತು ಇತರರಿಗೆ ವಿದೇಶದಿಂದ ಹಣಕಾಸು ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಬಗ್ಗೆ ಜಾರಿ ನಿರ್ದೇಶನಾಲಯಮ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಗುಂಪೊಂದು ಧರ್ಮಸ್ಥಳದ ಪಾವಿತ್ರ್ಯತೆ ಹಾಳು ಮಾಡಲು ಸಂಚು ರೂಪಿಸಿರುವ ಬಗ್ಗೆ ವರದಿಯಾಗಿದೆ. ಸ್ವತಃ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಎಡಪಂಥೀಯ ಗುಂಪುಗಳ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಸಹ ಹೇಳಿದ್ದಾರೆ. ಅನಾಮಿಕ ದೂರುದಾರನ ಮಾತುಗಳನ್ನು ನಂಬಿಕೊಂಡು ಸಿಎಂ ಸಿದ್ದರಾಮಯ್ಯನವರು ಎಸ್ಐಟಿ ರಚಿಸಿದ್ದಾರೆ ಎಂದೂ ವರದಿಯಾಗಿದೆ. ಇಡೀ ಸರ್ಕಾರವೇ ಅನಾಮಿಕ ವ್ಯಕ್ತಿಗೆ ಶರಣಾದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಬಾಹುಬಲಿ ಬೆಟ್ಟದ ಸಮೀಪ ಸೇರಿದಂತೆ ಧರ್ಮಸ್ಥಳದಲ್ಲಿ ಎಲ್ಲೆಂದರಲ್ಲಿ ಗುಂಡಿ ತೋಡಲಾಗಿದೆ. ಭಕ್ತರಿಗೆ ಕಸಿವಿಸಿ ಉಂಟಾಗುತ್ತಿದೆ. ಮಾಧ್ಯಮಗಳ ವರದಿಗಳ ಪ್ರಕಾರ, ತಮಿಳುನಾಡಿನ ರಾಜಕಾರಣಿಯೊಬ್ಬ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದು ಕರ್ನಾಟಕದ ಹಿಂದೂಗಳ ಭಾವನೆಗೆ ಧಕ್ಕೆ ತರಲು ಯೋಜನೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಧರ್ಮಸ್ಥಳಕ್ಕೆ ಮಸಿ ಬಳಿಯಲು ಮುಸ್ಲಿಂ ಯೂಟ್ಯೂಬರ್ ಮತ್ತು ಸಹಚರರಿಗೆ ವಿದೇಶದಿಂದ ಹಣಕಾಸು ನೆರವು ದೊರೆತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ನನ್ನ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿಯನ್ನು ವಿರೋಧಿಸುತ್ತಿರುವವರಿಗೆ ವಿದೇಶದಿಂದ ಹಣಕಾಸಿನ ನೆರವು ಬಂದಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



