ರಾಜ್ಯ

BMTC ಬಸ್ ಕೆಳಗೆ ಸಿಲುಕಿ ಟೆಕ್ಕಿ ಸಾವು, ಚಾಲಕ ಬಂಧನ

ಮಂಗಳವಾರ ಬೆಳಗ್ಗೆ 10.15ರ ಸುಮಾರಿಗೆ ಮಗು ಮತ್ತು ಪತ್ನಿಗೆ ಉಪಹಾರ ತರಲು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬಲಭಾಗದಿಂದ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದಾರೆ.

BMTC ಬಸ್ ಕೆಳಗೆ ಸಿಲುಕಿ ಟೆಕ್ಕಿ ಸಾವು, ಚಾಲಕ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಟೆಕ್ಕಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಮುಖ್ಯ ರಸ್ತೆಯ ವೈಭವ್ ಥಿಯೇಟರ್ ಬಳಿ ಮಂಗಳವಾರ ನಡೆದಿದೆ.

ಸಂಜಯ್ ನಗರದ ಎಇಸಿಎಸ್ ಲೇಔಟ್ ನಿವಾಸಿ ರೋಷನ್ (38) ಮೃತಪಟ್ಟವರು. ಇವರು ಕೊಡಗು ಮೂಲದವರಾಗಿದ್ದು, ನಗರದಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

ಮಂಗಳವಾರ ಬೆಳಗ್ಗೆ 10.15ರ ಸುಮಾರಿಗೆ ಮಗು ಮತ್ತು ಪತ್ನಿಗೆ ಉಪಹಾರ ತರಲು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬಲಭಾಗದಿಂದ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಯಾ ತಪ್ಪಿ ಕೆಳಗೆ ಬಿದ್ದಿದ್ದು, ಕೆಳಗೆ ಬಿದ್ದಾತನ ಮೇಲೆ ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರಗಳು ಹರಿದಿದೆ.

ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ರೋಷನ್ ಅವರು ತಲೆಗೆ ಹೆಲ್ಮೆಟ್ ಧರಿಸಿದ್ದರು. ಹೀಗಾಗಿ ತಲೆಗೆ ಯಾವುದೇ ಗಾಯವಾಗಿಲ್ಲ. ಆದರೆ ದೇಹದ ಮೇಲೆ ಬಸ್ ಹರಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ರೋಷನ್ ಅವರ ಮಾವ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಸ್ ಚಾಲಕ ಕಲ್ಲಪ್ಪ (45) ಅವರನ್ನು ಬಂಧಿಸಿದ್ದು, ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.