ಚಿತ್ರದುರ್ಗ ಕೊಲೆ: ಮತ್ತೊಬ್ಬನ ಜೊತೆ ಸಂಬಂಧ; ಮದುವೆಗೆ ಒತ್ತಾಯಿಸಿದ ದಲಿತ ಗರ್ಭಿಣಿ ವಿದ್ಯಾರ್ಥಿನಿಯನ್ನು ಕೊಂದ ಪ್ರಿಯಕರ!
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ 19 ವರ್ಷದ ವರ್ಷಿತಾ ಎಂದು ಗುರುತಿಸಲಾಗಿದೆ. ಮೊದಲಿಗೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ಸುಡಲಾಗಿದೆ ಎಂದು ಶಂಕಿಸಲಾಗಿತ್ತು. ಆದರೆ ಇದೀಗ ಸತ್ಯಾಂಶ ಹೊರಬಂದಿದೆ.
ಮೃತ ವರ್ಷಿತಾ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಾಸವಾಗಿದ್ದು ಊರಿಗೆ ಹೋಗುವುದಾಗಿ ಹಾಸ್ಟೆಲ್ ವಾರ್ಡನ್ ಗೆ ರಜೆ ಪತ್ರ ನೀಡಿ ಆಗಸ್ಟ್ 14ರಂದು ಹೊರಬಂದಿದ್ದಳು. ಆದರೆ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಆಕೆಯನ್ನು ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು ವರ್ಷಿತಾ ಪ್ರಿಯಕರ ಚೇತನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಿಗೆ ಬಂದಿದೆ.
ವಿಚಾರಣೆ ವೇಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಚೇತನ್ ತಾನು ವರ್ಷಿತಾಳನ್ನು ಪ್ರೀತಿಸುತ್ತಿದ್ದೆ. ಆದರೆ ಆಕೆ ಬೇರೊಬ್ಬನ ಜೊತೆ ಸಂಬಂಧ ಹೊಂದಿದ್ದಳು. ಇದರಿಂದ ಕೋಪಗೊಂಡ ತಾನು ಆಕೆಯನ್ನು ಕೊಲೆ ಮಾಡಿರುವುದಾಗಿ ಚೇತನ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ರಾತ್ರಿ ನಾನು ವರ್ಷಿತಾಳ ಜೊತೆ ಮಾತನಾಡುತ್ತಿದ್ದೆ. ಈ ವೇಳೆ ತಾನು ಗರ್ಭೀಣಿ ಆಗಿದ್ದು ಮದುವೆಯಾಗುವಂತೆ ಒತ್ತಾಯಿಸಿದಳು. ಆದರೆ ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು. ಇದೇ ವಿಚಾರವಾಗಿ ವಾಗ್ವಾದವಾಗಿ ಆಕೆಗೆ ಹಲ್ಲೆ ಮಾಡಿದೆ. ಆಕೆ ಸ್ಥಳದಲ್ಲೇ ಮೃತಪಟ್ಟಳು. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ ಎಂದು ಹೇಳಿದ್ದಾನೆ.

ಅನನ್ಯಾ ಭಟ್ ನಾಪತ್ತೆ ಕೇಸ್ಗೆ ಟ್ವಿಸ್ಟ್: ಯಾರದ್ದೋ ಫೋಟೋ ಕೊಟ್ಟು ಸಿಕ್ಕಿಹಾಕಿಕೊಂಡ ಸುಜಾತ ಭಟ್; ಆ ಮಹಿಳೆ ಯಾರು?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


