ರಾಜ್ಯ

ಮೈಸೂರು ದಸರಾ Air Show ಗೆ ಅನುಮತಿ: ರಾಜನಾಥ್ ಸಿಂಗ್ ಗೆ CM ಅಭಿನಂದನೆ

ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು.

ಮೈಸೂರು ದಸರಾ Air Show ಗೆ ಅನುಮತಿ: ರಾಜನಾಥ್ ಸಿಂಗ್ ಗೆ CM ಅಭಿನಂದನೆ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ(ಏರ್‌ ಶೋ) ಆಯೋಜಿಸಲು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಲ್ಲದೇ, ದಸರಾದಲ್ಲಿ ಪಾಲ್ಗೊಳ್ಳುವಂತೆ ರಾಜನಾಥ ಸಿಂಗ್ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ. ವೈಮಾನಿಕ ಪ್ರದರ್ಶನವು ಐತಿಹಾಸಿಕ ಉತ್ಸವದ ಭವ್ಯತೆಗೆ ಹೆಚ್ಚಿನ ಮೆರಗು ನೀಡುವುದಲ್ಲದೇ ದಸರಾ ನೋಡಲು ಬರುವ ಲಕ್ಷಾಂತರ ಜನರಲ್ಲಿ ದೇಶಭಕ್ತಿಯ ಭಾವವನ್ನು ತುಂಬುತ್ತದೆ ಎಂದು ತಮ್ಮ ಹೇಳಿಕೆಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನೀವು ಈ ಕಾರ್ಯಕ್ರಮದಲ್ಲಿ ಭಾಗಿಯಾದರೆ ಅದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ. ನಿಮ್ಮ ಉಪಸ್ಥಿತಿಯು ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಗೌರವ ಮತ್ತು ಮೆಚ್ಚುಗೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ದಸರಾದಲ್ಲಿ ಏರ್‌ ಶೋ ನಡೆಸಲು ಅನುಮತಿ ನೀಡುವಂತೆ ಕೋರಿ ಕಳೆದ ತಿಂಗಳು ರಾಜನಾಥ ಸಿಂಗ್ ಅವರನ್ನು ಖುದ್ದು ಭೇಟಿ ಮಾಡಿ ಸಿದ್ದರಾಮಯ್ಯ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.