ರಾಜ್ಯ

Dharmasthala: ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು; Video

ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ SIT ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Dharmasthala: ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು; Video
ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
Published On :

ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ.

ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಕಾರಣ ಮಹೇಶ್ ತಿಮರೋಡಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿರುವುದನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದಾರೆ. ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಅದಕ್ಕೆ ಸರಿಯಾದ ಉತ್ತರ ನೀಡದೇ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಉಡುಪಿಯತ್ತ!

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿಯನ್ನು ಉಜಿರೆಯ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದು ಉಡುಪಿಯತ್ತ ಕರೆದೊಯ್ದಿದ್ದಾರೆ. ಜತೆಗೆ ತಿಮರೋಡಿ ಅವರ ವಕೀಲರು ಹಾಗೂ ಬೆಂಬಲಿಗರು ಕೂಡ ಉಡುಪಿಯತ್ತ ತೆರಳಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?

ಧರ್ಮಸ್ಥಳ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅನೇಕ ಹೇಳಿಕೆಗಳನ್ನು ನೀಡಿದ್ದಾರೆ. ಹಲವಾರು ಮಂದಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಅವರ ಮೇಲಿದ್ದು, ಸ್ವತಃ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಕೊಲೆ ಆರೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ರೀತಿ, ಬಿಎಲ್ ಸಂತೋಷ್ ವಿರುದ್ಧವೂ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪವಿದ್ದು, ಈ ಬಗ್ಗೆ ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ, ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ತಿಮರೋಡಿಗೆ 2 ಬಾರಿ ಪೊಲೀಸರು ನೋಟಿಸ್​ ಕೊಟ್ಟಿದ್ದರು. ಕೊನೆಯದಾದಗಿ ಬುಧವಾರ ನೋಟಿಸ್ ನೀಡಲಾಗಿತ್ತು. ಗುರುವಾರ ಬೆಳಗ್ಗೆ 9 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಆ ನೋಟಿಸ್​​ಗೆ, ‘15 ದಿನಗೊಳಗೆ ಹಾಜರಾಗುತ್ತೇನೆ’ ಎಂದು ತಿಮರೋಡಿ ಉತ್ತರಿಸಿದ್ದರು. ಪೊಲೀಸರು ಕೊಟ್ಟ ನೋಟಿಸ್​​ನಲ್ಲೇ ಉತ್ತರಿಸಿ ಸಹಿ ಮಾಡಿದ್ದರು. ಈ ಬೆಳವಣಿಗೆ ನಂತರ ಪೊಲೀಸರು ಅವರ ನಿವಾಸಕ್ಕೆ ದೌಡಾಯಿಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.