ರಾಜ್ಯ

'ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರ, ಬಿಜೆಪಿಯವರೇ ಕಾರಣ': ಪೊಲೀಸರ ಜೊತೆ ವಿಚಾರಣೆಗೆ ಹೊರಟ ಮಹೇಶ್ ತಿಮರೋಡಿ

ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೂಡ ಮಹೇಶ್ ತಿಮರೋಡಿ ಮೇಲಿದೆ.

'ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರ, ಬಿಜೆಪಿಯವರೇ ಕಾರಣ': ಪೊಲೀಸರ ಜೊತೆ ವಿಚಾರಣೆಗೆ ಹೊರಟ ಮಹೇಶ್ ತಿಮರೋಡಿ
ಮಹೇಶ್ ತಿಮರೋಡಿ
Published On :

ಬೆಳ್ತಂಗಡಿ: ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದರೂ ನಿನ್ನೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಗುರುವಾರ ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಪೊಲೀಸರು ಹೋದ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಹೊರಗೆ ಹೈಡ್ರಾಮಾ ನಡೆದಿದ್ದು, ಕೊನೆಗೆ ಪೊಲೀಸರ ಜೊತೆ ತಮ್ಮ ಖಾಸಗಿ ಕಾರಿನಲ್ಲಿಯೇ ಮಹೇಶ್ ತಿಮರೋಡಿ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದರು. ಈ ಸಂದರ್ಭದಲ್ಲಿ ಮಹೇಶ್ ತಿಮರೋಡಿ ಅವರ ಬೆಂಬಲಿಗರು ಸಹ ಇದ್ದರು.

ಬಿಜೆಪಿ ನಾಯಕ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ತಿಮರೋಡಿಯವರು ಬಿ ಎಲ್ ಸಂತೋಷ್ ಸೇರಿದಂತೆ ಹಲವು ಜನರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು.

ಇಂದು ಖಾಸಗಿ ಕಾರಿನಲ್ಲಿ ಕುಳಿತು ಮಾಧ್ಯಮ ಪ್ರತಿನಿಧಿಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದ ತಿಮರೋಡಿ, ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ ಅದಕ್ಕೆ ಸರ್ಕಾರ ಮತ್ತು ಬಿಜೆಪಿಯವರೇ ಕಾರಣ, ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ನೀಡುತ್ತೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.