'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.
ಈ ಬಾರಿ ಮೈಸೂರು ದಸರಾ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸಿಎಂ ತಿಳಿಸಿದರು.
ಇನ್ನು ದಸರಾದಲ್ಲಿ ಏರ್ ಶೋಗೆ ಅನುಮತಿ ಸಿಕ್ಕಿದೆ. ಇದಕ್ಕಾಗಿ ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದೆ. ಅವರಿಗೂ ದಸರಾಗೆ ಆಹ್ವಾನಿಸಿದ್ದೇನೆ ಎಂದು ಸಿಎಂ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



