'ನೀನು ಬೂಟು ನೆಕ್ಕಿದ ವಂಶಸ್ಥ': ಶಾಸಕ ಯತ್ನಾಳ್ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ Muslim ಯುವಕ; ಭುಗಿಲೆದ್ದ ಆಕ್ರೋಶ!
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಜಾನ್ ಕುರಿತಾಗಿ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ವಿಡಿಯೋ ಮಾಡಿ ಶಾಸಕರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದನು.

ಕೊಪ್ಪಳ: ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಆಜಾನ್ ಕುರಿತಾಗಿ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ವಿಡಿಯೋ ಮಾಡಿ ಶಾಸಕರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದನು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯತ್ನಾಳ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕನಕಗಿರಿ ಪೊಲೀಸರು ಆರೋಪಿ ಕನಕಗಿರಿಯ ಮುಸಲಾಪುರ ಗ್ರಾಮದ ಮುಸ್ಲಿಂ (Muslim) ಯುವಕ ಹುಸೇನಿಯನ್ನು ಬಂಧಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?
ನೀನು ಬೂಟು ನೆಕ್ಕಿದ ವಂಶಸ್ಥ ಎಂದು ಯುವಕ ಹುಸೇನಿ ನಾಲಿಗೆ ಹರಿಬಿಟ್ಟಿದ್ದನು. ಈ ವಿಡಿಯೋಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಯತ್ನಾಳ್ ಬೆಂಬಲಿಗರು ಮುಸಲಾಪುರ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ಆರೋಪಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ನಂತರ ಹುಸೇನಿ ಕ್ಷಮೆ ಕೂಡ ಕೇಳಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



