ಬೆಂಗಳೂರಿನಲ್ಲಿ Hit And Run: ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು
ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ದಂಪತಿ ಹೋಗುತ್ತಿದ್ದರು. ಈ ವೇಳೆ ಒನ್ ವೇಯಲ್ಲಿ ಬರುತ್ತಿದ್ದ ಕಾರು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಪ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಹಿಟ್ ಅಂಡ್ ರನ್‌ಗೆ ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಸಮೀಪದ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ನಡೆದಿದೆ.
ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ದಂಪತಿ ಹೋಗುತ್ತಿದ್ದರು. ಈ ವೇಳೆ ಒನ್ ವೇಯಲ್ಲಿ ಬರುತ್ತಿದ್ದ ಕಾರು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಪ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ. ನೇತ್ರಾವತಿ ಹಿಟ್ ಆ್ಯಂಡ್ ರನ್‌ಗೆ ಬಲಿಯಾದ ಮಹಿಳೆ.
ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಚ್ಚಹಳ್ಳಿ ಬ್ರಿಡ್ಜ್ ಮೇಲೆ ಈ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಚಾಲಕ ಕಾರನ್ನ ನಿಲ್ಲಿಸದೆ ಪರಾರಿಯಾಗಿದ್ದಾನೆ. ನೇತ್ರಾವತಿ ಹಾಗೂ ಆಕೆಯ ಪತಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗುತ್ತಿದ್ದರು ಎನ್ನಲಾಗ್ತಿದೆ. ಈ ಮಹಿಳೆ ಬೆಂಗಳೂರಿನ ಬಾಣಸವಾಡಿ ಮೂಲದವರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಬೈಕ್ ನಿಂದ ಮಹಿಳೆ ನೇತ್ರಾವತಿ ಫ್ಲೈಓವರ್ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನೇತ್ರಾವತಿ ಬಲ ಭಾಗಕ್ಕೆ ಬಿದ್ದಿದ್ದಾರೆ, ಪತಿ ಬೈಕ್ನ ಎಡ ಭಾಗಕ್ಕೆ ಬಿದ್ದಿದ್ದಾರೆ. ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



