ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ; ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ನಾಳೆ ಗೌರಿ ಹಬ್ಬ, ನಾಡಿದ್ದು ಗಣೇಶ ಹಬ್ಬ. ಇದಕ್ಕಾಗಿ ನಾಡಿನ ಜನತೆ ಭರ್ಜರಿ ಸಿದ್ದತೆ ಮಾಡಿಕೊಂಡಿದ್ದು, ಸಡಗರ-ಸಂಭ್ರಮದಿಂದ ಆಚರಿಸಲು ತಯಾರಿ ನಡೆಸಿದ್ದಾರೆ.
ಮಾರುಕಟ್ಟೆಯಲ್ಲಿ ತರಹೇವಾರಿ ಮೂರ್ತಿಗಳು ಲಗ್ಗೆ ಇಟ್ಟಿದ್ದು, ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ವಿಘ್ನ ವಿನಾಶಕ, ಪ್ರಥಮ ಪೂಜಿತನ ಅದ್ದೂರಿ ಆಚರಣೆಗೆ ಜನರು ಬೇಕಾದ ಅಗತ್ಯ ಸಿದ್ದತೆಯಲ್ಲಿ ತೊಡಗಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಗೌರಿ - ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.
ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ ಎಂದು ಕರೆ ನೀಡಿದ್ದಾರೆ.
ಹಬ್ಬವನ್ನು ಸಂಭ್ರಮ - ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



