NCC ಸೆಲೆಕ್ಷನ್ ವೇಳೆ ಓಡುತ್ತಿದ್ದಾಗ ಹೃದಯಾಘಾತ: ಕುಸಿದು ಬಿದ್ದು IIT ವಿದ್ಯಾರ್ಥಿ ಸಾವು..!
ಎರಡು ದಿನಗಳ ಹಿಂದೆ ಐಐಟಿ ಕ್ಯಾಂಪಸ್‌ನಲ್ಲಿ ಎನ್‌ಸಿಸಿ ಆಯ್ಕೆಗಾಗಿ ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಸ್ತಿತ್ವ ಗುಪ್ತಾ ಓಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ.

ಧಾರವಾಡ: ಧಾರವಾಡದ ಐಐಟಿಯಲ್ಲಿ ಎನ್‌ಸಿಸಿ ಆಯ್ಕೆ ರನ್ನಿಂಗ್‌ರೇಸ್ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಅಸ್ತಿತ್ವ ಗುಪ್ತಾ (20) ಮೃತ ದುರ್ದೈವಿ. ಈತ ಮೆಕ್ಯಾನಿಕಲ್ ಮೆಟೀರಿಯಲ್ಸ್ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್ (ಎಂ-ಟೆಕ್) ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಐಐಟಿ ಕ್ಯಾಂಪಸ್‌ನಲ್ಲಿ ಎನ್‌ಸಿಸಿ ಆಯ್ಕೆಗಾಗಿ ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಸ್ತಿತ್ವ ಗುಪ್ತಾ ಓಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ.
ಕೂಡಲೇ ಕ್ಯಾಂಪಸ್‌ನ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ನಂತರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಸಂಜೆವರೆಗೂ ಆರೋಗ್ಯವಾಗಿಯೇ ಇದ್ದ ವಿದ್ಯಾರ್ಥಿ ರಾತ್ರಿ ವೇಳೆಗೆ ಮತ್ತೆ ಹೃದಯಾಘಾತವಾಗಿದೆ. ಈ ವೇಳೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆಂದು ತಿಳಿದುಬಂದಿದೆ.
ಈ ನಡುವೆ ಅಧಿಕಾರಿಗಳು ಮೃತ ವಿದ್ಯಾರ್ಥಿಯ ಪೋಷಕರಿಗೆ ಮೃತದೇಹವನ್ನು ಹಸ್ತಾಂತರಿಸಿದ್ದು, ಬಿಹಾರದ ಹುಟ್ಟೂರು ಗೋರ್ಗಾನ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಪೋಷಕರು ತಿಳಿಸಿದ್ದಾರೆ. ಮೃತದೇಹವನ್ನು ಬೆಂಗಳೂರಿನಿಂದ ವಿಮಾನದ ಮೂಲಕ ಗೋರ್ಗಾನ್‌ಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ವೈದ್ಯರು ಇದು ಸಹಜ ಸಾವು ಎಂದು ಹೇಳಿದ್ದು, ಮರಣೋತ್ತರ ಪರೀಕ್ಷೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಮೃತನ ಪೋಷಕರು ಸಹ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಮ್ಮ ಮಗನ ಸಾವಿನ ಯಾವುದೇ ಪಿತೂರಿ ಇಲ್ಲ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



