ರಾಜ್ಯ

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

ತಿಮರೋಡಿ ಹಾಗೂ ಆವರ ಸಹೋದರ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲಿ ಕೂಡಾ ಎಸ್ ಐಟಿ ತನಿಖೆ ನಡೆಸುತ್ತಿದೆ. ಜಿತೇಂದ್ರ ದಯಾಮ ಸೇರಿದಂತೆ ಹಲವು ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ.

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ
ಮಹೇಶ್ ತಿಮರೋಡಿ
Published On :

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಲ್ಲಿ ಸುಳ್ಳು ಹೆಣೆದಿದ್ದಾರೆ ಎಂಬ ಶಂಕೆಯಿಂದ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಇಂದು ಬೆಳಗ್ಗೆ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿದೆ. ಈ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆ ಆಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಶೋಧಕ್ಕೆ ಸರ್ಚ್ ವಾರಂಟ್ (ನ್ಯಾಯಾಲಯದ ಅನುಮತಿ) ಪಡೆದ ಎಸ್ ಐ ಟಿ, ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ತಿಮರೋಡಿ ಮನೆಗೆ ಮಹಜರು ನಡೆಸಿ ತೀವ್ರ ಶೋಧ ನಡೆಸಿತು.

ಮಹೇಶ್ ತಿಮರೋಡಿ ಹಾಗೂ ಆವರ ಸಹೋದರ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲಿ ಕೂಡಾ ಎಸ್ ಐಟಿ ತನಿಖೆ ನಡೆಸುತ್ತಿದೆ. ಜಿತೇಂದ್ರ ದಯಾಮ ಸೇರಿದಂತೆ ಹಲವು ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ. ಚಿನ್ನಯ್ಯನ 25 ವಿಡಿಯೋಗಳನ್ನು ಮಾಡಲಾಗಿದೆ. ಈಗಾಗಲೆ 3 ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ.

ಚಿನ್ನಯ್ಯನ ಮೊಬೈಲ್ ಗಾಗಿ ತಿಮರೋಡಿ ಮನೆಯಲ್ಲಿ ಶೋಧ ನಡೆದಿದ್ದು, ಆತನ ಬಳಸುತ್ತಿದ್ದ ಮೊಬೈಲ್ ಸಿಕ್ಕಿದೆ ಎನ್ನಲಾಗಿದೆ, ತಿಮರೋಡಿ ಮನೆಯಲ್ಲಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಶಂಕೆ ಇದ್ದು, ಈತ ಇದೇ ಮನೆಯಿಂದ ಹಲವು ಯೂಟ್ಯೂಬ್ ಚಾನೆಲ್ ಗಳಿಗೆ ಸಂದರ್ಶನ ನೀಡಿದ್ದ.

ಇತ್ತೀಚೆಗಷ್ಟೆ ಬಿಜೆಪಿ ನಾಯಕ ಬಿಎಲ್‌ ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಕೊಟ್ಟ ಅವಹೇಳನಕಾರಿ ಹೇಳಿಕೆಯ ಹಿನ್ನೆಲೆ ಉಡುಪಿ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿ ಜಾಮೀನು ಪಡೆದು ಹೊರಗೆ ಬಂದಿದ್ದರು. ಇದೀಗ ಧರ್ಮಸ್ಥಳ ಬುರುಡೆ ಪ್ರಕರಣ ಮುಳುವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.