ಡಿ.ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದಾರೆ, ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ
ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ನವದೆಹಲಿ: ಮೈಸೂರು ಚಾಮುಂಡಿ ಬೆಟ್ಟದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ.
ಇತ್ತೀಚೆಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು ಎಂದು ಕಿಡಿಕಾರಿದ್ದಾರೆ.
ಚಾಮುಂಡಿ ತಾಯಿ ಈ ನಾಡಿನ ಹಿಂದೂಗಳ ಪಾಲಿನ ಅಧಿದೇವತೆ, ಪೂಜನೀಯಳು, ದಸರಾ ಸಮಯದಲ್ಲಿ ಚಾಮುಂಡಿಗೆ ಪೂಜೆ ಮಾಡಿಯೇ ಮುನ್ನುಡಿ ಇಡಲಾಗುತ್ತದೆ. ತಮ್ಮ ಹೈಕಮಾಂಡ್ ನ್ನು ಸಮಾಧಾನಗೊಳಿಸಲು, ಖುಷಿಪಡಿಸಲು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು.
ಹಿಂದೂ ಜನರ ಭಾವನೆಗಳಿಗೆ ತಮ್ಮ ಮಾತಿನ ಮೂಲಕ ನೋವುಂಟುಮಾಡಿರುವ ಡಿ ಕೆ ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



