ಬೆಂಗಳೂರು: ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸಮಯ ನಿಗದಿಪಡಿಸಿ; ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗಗಳನ್ನು ಹಾಕಲು ಬಿಡಬ್ಲ್ಯೂಎಸ್‌ಎಸ್‌ಬಿ ರಸ್ತೆಗಳನ್ನು ಅಗೆಯುತ್ತಿದೆ. ಆದರೆ, ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ.

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಗೆದ ರಸ್ತೆಗಳನ್ನು ದುರಸ್ತಿ ಮಾಡಲು ಸಮಯ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.
ರಸ್ತೆ ಮತ್ತು ಇತರ ನಾಗರಿಕ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗಗಳನ್ನು ಹಾಕಲು ಬಿಡಬ್ಲ್ಯೂಎಸ್‌ಎಸ್‌ಬಿ ರಸ್ತೆಗಳನ್ನು ಅಗೆಯುತ್ತಿದೆ. ಆದರೆ, ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.
ಈ ರಸ್ತೆಗಳನ್ನು ದುರಸ್ತಿ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರದ ವಿವಿಧ ಭಾಗಗಳಲ್ಲಿ ಸುಮಾರು 7.3 ಕಿ.ಮೀ ರಸ್ತೆಗಳು ಹಾನಿಗೊಳಗಾಗಿವೆ. ದುರಸ್ತಿಗಾಗಿ ನಿರ್ದಿಷ್ಟ ರಸ್ತೆಗಳನ್ನು ಗುರುತಿಸಿ ಪಟ್ಟಿ ಮಾಡಿ. ತಕ್ಷಣ ಕಾಮಗಾರಿ ಕೆಲಸ ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಪಾದಚಾರಿ ಮಾರ್ಗಗಳು ಮತ್ತು ರಸ್ತೆಬದಿಗಳಲ್ಲಿ ಪ್ರಸ್ತುತ ಅಳವಡಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವಂತೆ ಬೆಸ್ಕಾಂಗೆ ನಿರ್ದೇಶನ ನೀಡಿದರು.
ರಸ್ತೆ ಗುಂಡಿಗಳನ್ನು ಸರಿಪಡಿಸಲು ಮತ್ತು ಸುಧಾರಣಾ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



