ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆಗಿದ್ದರಿಂದ ಬಸ್, ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗಳಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.

ಮಂಗಳೂರು: ಕಾಸರಗೋಡಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ಬಸ್ ಗುರುವಾರ ಬ್ರೇಕ್ ಫೇಲ್ ಆಗಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗಳಿಗೆ ಮತ್ತು ಆಟೋಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಜನ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆಗಿದ್ದರಿಂದ ಬಸ್, ಚಾಲಕನ ನಿಯಂತ್ರಣ ತಪ್ಪಿ, ಹಿಂದಕ್ಕೆ ಬಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗಳಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.
ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮಗು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ.
ಇದಲ್ಲದೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



