ರಾಜ್ಯ

ಮಂಡ್ಯ: ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು

"ರಾತ್ರಿ ವೇಳೆ ಯುವಕರು ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದರು. ಈ ಸಮಯದಲ್ಲಿ, ಯುವಕರೊಂದಿಗೆ ನೀರಿಗೆ ಇಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮಂಡ್ಯ: ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು
ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ)
Published On :

ಮಂಡ್ಯ: ಮಂಡ್ಯ ಜಿಲ್ಲೆಯ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ 28 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಮಂಡ್ಯದ ಯರಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಯುವಕರ ಗುಂಪೊಂದು ತಡರಾತ್ರಿ ಗಣೇಶ ವಿಸರ್ಜನೆ ಮಾಡುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಿಳಿಸಿದ್ದಾರೆ.

"ರಾತ್ರಿ ವೇಳೆ ಯುವಕರು ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದರು. ಈ ಸಮಯದಲ್ಲಿ, ಯುವಕರೊಂದಿಗೆ ನೀರಿಗೆ ಇಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪ್ರದೀಪ್ ಮದ್ಯ ಸೇವಿಸಿ ನೀರಿಗೆ ಇಳಿದಿದ್ದರು ಎಂದು ಶಂಕಿಸಲಾಗಿದೆ" ಎಂದು ಎಸ್ಪಿ ಹೇಳಿದ್ದಾರೆ.

"ಅಗ್ನಿಶಾಮಕ ದಳದ ಸಿಬ್ಬಂದಿ ಪ್ರದೀಪ್ ಮೃತದೇಹವನ್ನು ಹೊರತೆಗೆದಿದ್ದು, ಈ ಸಂಬಂಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.