ರಾಜ್ಯ

ಬೆಳಗಾವಿ: ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್‌ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೆಳಗಾವಿ: ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್‌ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು
ಅಪಘಾತಕ್ಕೀಡಾದ ಬಸ್
Published On :

ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕನ ಅಜಾಗರೂಕ ಚಾಲನೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಘಾಟ್ ಪ್ರದೇಶದಲ್ಲಿ ತೀವ್ರ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಬಸ್‌ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಸ್ಥಳೀಯರು ಹಾಗೂ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ರಕ್ಷಣೆ ನಡೆಸಿ ಹೊರತೆಗೆದರು. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್‌ನಲ್ಲಿ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.