ಅಭಿಮಾನ್ ಸ್ಟುಡಿಯೋ: ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ; ಸಚಿವ ಈಶ್ವರ ಖಂಡ್ರೆ ಹೇಳಿದ್ದು ಏನು?
ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು.

ಬೀದರ್: ದಿವಂಗತ ನಟ ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಸ್ಮಾರಕವನ್ನು ತೆರವು ಮಾಡುವ ಮೂಲಕ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ನಟ ಬಾಲಕೃಷ್ಣ ಕುಟುಂಬಕ್ಕೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಭಿಮಾನ್ ಸ್ಟುಡಿಯೋಗಾಗಿ ನೀಡಿದ್ದ ಜಾಗವನ್ನು ಅರಣ್ಯ ಭೂಮಿ ಎಂದು ಘೋಷಣೆ ಮಾಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಇಲ್ಲಿ 10 ಎಕರೆ ಅರಣ್ಯ ಭೂಮಿಯಿದ್ದು ಇದನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್.ಎಂ.ಟಿ. ವಶದಲ್ಲಿರುವುದು ಅರಣ್ಯ ಭೂಮಿ ಎಂದು ತಮಗೆ ತಿಳಿದ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಅದೇ ರೀತಿ ಯಾವುದು ಅರಣ್ಯ ಭೂಮಿಯೋ ಅದು ಅರಣ್ಯವಾಗಿ ಉಳಿಯತ್ತೆ ಎಂದರು.
ಮೇರುನಟ ದಿವಂಗತ ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡುತ್ತಾರೆ ಎಂದು ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



