ಬೆಂಗಳೂರು ಕಾಲ್ತುಳಿತ: ಮೃತಪಟ್ಟವರ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೆರವು ನೀಡಿದ RCB; ಅಭಿಮಾನಿಗಳ ಮೆಚ್ಚುಗೆ
ಜೂನ್ 4, 2025 ರಂದು ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು.

ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ.
ಜೂನ್ 4, 2025 ರಂದು ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು. ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ.
ಅಲ್ಲದೆ ಆರ್ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ.
ಆರ್ಸಿಬಿ ಕೇರ್ಸ್ನ ಅಧಿಕೃತ ಪ್ರಕಟಣೆ ಹೀಗಿದೆ:
ಜನವರಿ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.
ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ನಗರ, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.
ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್ಸಿಬಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.
ಇದು ಆರ್ಸಿಬಿ ಕೇರ್ಸ್ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯಾಗಿದೆ. ಆರ್ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ..ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ.
ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಕಾಳಜಿಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಆರ್ಸಿಬಿ ಕೇರ್ಸ್ನ ನಡೆಯನ್ನು ಸ್ವಾಗತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


