ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ: 15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ; ಪೋಕ್ಸೊ ಪ್ರಕರಣ ದಾಖಲು
ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು. ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಚಿಕ್ಕೋಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು. ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.
ಅಧ್ಯಕ್ಷ ಬಂಧನದ ಭೀತಿಯಿಂದ ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಕೃತ್ಯ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.

ಬೆಂಗಳೂರು: ಬಾಲಕನ ಮೇಲೆ 52 ವರ್ಷದ ಶಿಕ್ಷಕಿ ಅತ್ಯಾಚಾರ; ಪೋಕ್ಸೋ ಪ್ರಕರಣ ರದ್ದುಪಡಿಸಲ್ಲ, ಹೈಕೋರ್ಟ್ ಮಹತ್ವದ ತೀರ್ಪು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


