ಜಲಜೀವನ್ ಮಿಷನ್: 99 ಗುತ್ತಿಗೆದಾರರ ವಿರುದ್ಧ ಕ್ರಮ; ಕೇಂದ್ರ ಸಚಿವ ವಿ.ಸೋಮಣ್ಣ
ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 169 ದೂರುಗಳು ಸಲ್ಲಿಕೆಯಾಗಿವೆ. ಒಂಬತ್ತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗಿದೆ ಎಂದರು.

ನವದೆಹಲಿ: ಜಲಜೀವನ್ ಮಿಷನ್ ಯೋಜನೆಯಲ್ಲಿ ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ 99 ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಲೋಕಸಭೆಯಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 169 ದೂರುಗಳು ಸಲ್ಲಿಕೆಯಾಗಿವೆ. ಒಂಬತ್ತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗಿದೆ ಎಂದರು.
ಯೋಜನೆಯ ಅನುಷ್ಠಾನದಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ 32 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ 17,036 ದೂರುಗಳು ಬಂದಿವೆ. ಈ ಪೈಕಿ ಶೇ 8ರಷ್ಟು ದೂರುಗಳು ಉತ್ತರ ಪ್ರದೇಶದಿಂದಲೇ (14,212) ಸಲ್ಲಿಕೆಯಾಗಿವೆ. ಈ ರಾಜ್ಯದಲ್ಲಿ 171 ಅಧಿಕಾರಿಗಳು ಹಾಗೂ 119 ಗುತ್ತಿಗೆದಾರರ ವಿರುದ್ಧ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



