ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ; ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ
ನಿಮ್ಮ ಸಂಘದ ಪ್ರತಿನಿಧಿಗಳಲ್ಲಿ 10 ಜನ ಪ್ರಮುಖರು ದೆಹಲಿಗೆ ಬನ್ನಿ. ನಾನೇ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆ ಸಭೆ ಏರ್ಪಾಡು ಮಾಡಿಸುತ್ತೇನೆ. ನೀವು ಬಂದು ಹೋಗುವ ವಿಮಾನಯಾನ ವೆಚ್ಚ ಹಾಗೂ ದೆಹಲಿಯಲ್ಲಿ ವಸತಿ ವ್ಯವಸ್ಥೆಯನ್ನು ನಾನೇ ಕಲ್ಪಿಸುವೆ.

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ ಕುಮಾರಸ್ವಾಮಿಯವರು ದೂರವಾಣಿಯಲ್ಲಿ ಮಾತನಾಡಿದರು.
ನಿಮ್ಮ ಸಂಘದ ಪ್ರತಿನಿಧಿಗಳಲ್ಲಿ 10 ಜನ ಪ್ರಮುಖರು ದೆಹಲಿಗೆ ಬನ್ನಿ. ನಾನೇ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆ ಸಭೆ ಏರ್ಪಾಡು ಮಾಡಿಸುತ್ತೇನೆ. ನೀವು ಬಂದು ಹೋಗುವ ವಿಮಾನಯಾನ ವೆಚ್ಚ ಹಾಗೂ ದೆಹಲಿಯಲ್ಲಿ ವಸತಿ ವ್ಯವಸ್ಥೆಯನ್ನು ನಾನೇ ಕಲ್ಪಿಸುವೆ ಎಂದು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



