Karnataka Rain: ದಿತ್ವಾ ಚಂಡಮಾರುತ ಪ್ರಭಾವ; ಕರಾವಳಿ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ
ನಿನ್ನೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರು: ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಮತ್ತು ಕರ್ನಾಟಕದ ಹಲವಾರು ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ನಿನ್ನೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ ಮೂರು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರ, ಶಿವಮೊಗ್ಗ, ಉಡುಪ, ಚಿಕ್ಕಮಗಳೂರ, ದಕ್ಷಿಣ ಕನ್ನ, ಕೊಡಗು, ಮೈಸೂರ, ಚಾಮರಾಜನಗ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಮಾಡಲಾಗಿದೆ.
ಬಂಗಾಳಕೊಲ್ಲಿಯ ನೈಋತ್ಯ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತದಿಂದ ನಿಧಾನವಾಗಿ ದಕ್ಷಿಣ-ನೈಋತ್ಯ ದಿಕ್ಕಿಗೆ ಚಲಿಸುತ್ತಿದೆ. ಇದರಿಂದ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



