ಚಿಕ್ಕಮಗಳೂರು: ಕಡೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ.
ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ.
ಗಣೇಶ್ ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶಾಸಕ ಆನಂದ್ ಪ್ರತಿಕ್ರಿಯೆ, ಅಸಮಾಧಾನ
ಘಟನೆ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



