ಬೆಂಗಳೂರಿನಲ್ಲಿ 2,215 ಕೋಟಿ ರೂ ಮೊತ್ತದ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಅನುಮೋದನೆ!
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು 2,215 ಕೋಟಿ ರೂಪಾಯಿ ಮೊತ್ತದ ಅವಳಿ ಸುರಂಗ ರಸ್ತೆ ಮತ್ತು ಫ್ಲೈಓವರ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು 2,215 ಕೋಟಿ ರೂಪಾಯಿ ಮೊತ್ತದ ಅವಳಿ ಸುರಂಗ ರಸ್ತೆ ಮತ್ತು ಫ್ಲೈಓವರ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಬ್ಬಾಳ ಫ್ಲೈಓವರ್-ಮೇಖ್ರಿ ವೃತ್ತದ ನಡುವೆ ಸುರಂಗ ರಸ್ತೆ ಹಾಗೂ ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಡಿಸಿಎಂ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಆದೇಶದ ಬಳಿಕ ಅವಳಿ ಸುರಂಗ ರಸ್ತೆ ಮತ್ತು ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.
ಈ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕಾರ್ಯಗತಗೊಳಿಸಲಿವೆ. ರಾಷ್ಟ್ರೀಯ ಹೆದ್ದಾರಿ (NH)ಯ ಭಾಗವಾಗಿರುವ ಈ ರಸ್ತೆಯನ್ನು ಇನ್ನು ಮುಂದೆ ಅಗಲೀಕರಣ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಹೆಬ್ಬಾಳ ಕೆರೆ ಸುತ್ತಲೂ ಭೂಮಿಯ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK) ಕ್ಯಾಂಪಸ್‌ನಲ್ಲಿರುವ ಭೂಮಿಯನ್ನು ಸಹ ಈ ಯೋಜನೆಯು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಸಣ್ಣ ಸುರಂಗ ರಸ್ತೆ ಯೋಜನೆಯು ಬಳ್ಳಾರಿ ರಸ್ತೆಯ ಮಧ್ಯದಲ್ಲಿ ಮೇಖ್ರಿ ವೃತ್ತದಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಅಂಡರ್‌ಪಾಸ್ ನಿರ್ಮಾಣ ಮತ್ತು ಹೆಬ್ಬಾಳ ಕೆರೆಯ ಎರಡೂ ಬದಿಗಳಲ್ಲಿ ರಸ್ತೆ ನಿರ್ಮಾಣದ ಜೊತೆಗೆ ಜಿಕೆವಿಕೆ ಆವರಣದಲ್ಲಿ ಸುರಂಗ ಮಾರ್ಗ ನಿರ್ಮಾಣವನ್ನು ಒಳಗೊಂಡಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



