ಕೊಪ್ಪಳ: ಬೈಕ್ಗೆ ಲಾರಿ ಡಿಕ್ಕಿ; ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಬರುತ್ತಿದ್ದ ಜೋಡಿ ಸಾವು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.

ಗಂಗಾವತಿ: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಮನೆಗೆ ಮರಳುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಈ ಜೋಡಿ ಪ್ರಿ ವೆಡ್ಡಿಂಗ್ ಫೋಟೋಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದೆ.
5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿಗೆ ಡಿಸೆಂಬರ್ 21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯಕ್ಕೆ ಹೋಗಿ, ವಾಪಸ್ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕವಿತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಕರಿಯಪ್ಪ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



