ರಾಜ್ಯ

ಕುರ್ಚಿ ಕದನದ ನಡುವೆಯೇ ಸಿಎಂ ಸಿದ್ದರಾಮಯ್ಯಗೆ ಬಿಗ್​​ ಶಾಕ್​​; ಸುಪ್ರೀಂ ಕೋರ್ಟ್ ನೋಟಿಸ್!

ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.

ಕುರ್ಚಿ ಕದನದ ನಡುವೆಯೇ ಸಿಎಂ ಸಿದ್ದರಾಮಯ್ಯಗೆ ಬಿಗ್​​ ಶಾಕ್​​; ಸುಪ್ರೀಂ ಕೋರ್ಟ್ ನೋಟಿಸ್!
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಸಿಎಂ ಕುರ್ಚಿ ಕದನದ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ನಂತರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯಲ್ಲಿ ಜನತೆಗೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದರು.

ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ನ್ಯಾ.ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.