ರಾಜ್ಯ

ಬೆಳಗಾವಿಯಲ್ಲಿಯೂ ಮುಂದಿನ ಸಿಎಂ 'ಡಿಕೆ.. ಡಿಕೆ' ಘೋಷಣೆ; ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಏನೆಂದರು?

ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ಬೆಂಬಲಿಗರು, ‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ’ ಎಂದು ಒಂದೇ ಸಮನೆ ಘೋಷಣೆಗಳನ್ನು ಕೂಗಿದ್ದಾರೆ.

ಬೆಳಗಾವಿಯಲ್ಲಿಯೂ ಮುಂದಿನ ಸಿಎಂ 'ಡಿಕೆ.. ಡಿಕೆ' ಘೋಷಣೆ; ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಏನೆಂದರು?
ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಡಿ ಕೆ ಶಿವಕುಮಾರ್
Published On :

ಬೆಳಗಾವಿ: ವಿಧಾನಸಭೆ ಚಳಿಗಾಲದ ಅಧಿವೇಶನ ಮಧ್ಯೆ ಕೂಡ ಸಿಎಂ ಕುರ್ಚಿ ಕದನ, ಘೋಷಣೆ ನಿಂತಿಲ್ಲ. ಹೈಕಮಾಂಡ್ ಸೂಚನೆಯನ್ನೂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣದ ಬೆಂಬಲಿಗರು ಕ್ಯಾರೇ ಮಾಡುತ್ತಿಲ್ಲ.

ಬೆಳಗಾವಿಯಲ್ಲಿ ಆರಂಭಗೊಂಡಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವುದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮಂಗಳವಾರ ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ಬೆಂಬಲಿಗರು, ‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ’ ಎಂದು ಒಂದೇ ಸಮನೆ ಘೋಷಣೆಗಳನ್ನು ಕೂಗಿದ್ದಾರೆ.

ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿ ಅವಧಿ ಪೂರೈಸಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದರು. ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರ ಘೋಷಣೆ ಮೊಳಗಿದೆ.

ಇಂದು ಬೆಳಗಾವಿಗೆ ಹೊರಡುವ ಮುನ್ನ ಡಾ ಯತೀಂದ್ರ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದಷ್ಟೇ ಹೇಳಿದ್ದಾರೆ.

ಬೆಳಗಾವಿಗೆ ಆಗಮಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿವೆ. ವಿಶೇಷವಾಗಿ ರೈತರ ಸಮಸ್ಯೆಯ ಬಗ್ಗೆ. ಕೇಂದ್ರ ಸರ್ಕಾರ ರೈತರ ಸಮಸ್ಯೆಯಲ್ಲಿ ಏಕೆ ಭಾಗಿಯಾಗುತ್ತಿಲ್ಲ ಕನಿಷ್ಠ ಬೆಂಬಲ ಬೆಲೆಯನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ? ನಾವು ಕಬ್ಬಿನ ಬೆಲೆಯನ್ನು ಹೆಚ್ಚಿಸಿದ್ದೇವೆ, ಆದರೆ ಕೇಂದ್ರ ಸರ್ಕಾರ ಸಕ್ಕರೆ ಬೆಲೆಯನ್ನು ಏಕೆ ಹೆಚ್ಚಿಸುತ್ತಿಲ್ಲ ಎಂದು ಕೇಳಿದರು.

ಹೆಚ್ಚುತ್ತಿರುವ ಸಕ್ಕರೆ ಬೆಲೆಯೊಂದಿಗೆ ಉಳಿದ ಮೊತ್ತವನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕಕ್ಕೆ ನೀಡುವಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಈ ದಿಕ್ಕಿನಲ್ಲಿ ನಿರ್ಣಯ ಮುಂದುವರಿಯುತ್ತದೆ ಎಂದು ನಾವು ಭಾವಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.