ಹಾಸನ: ಮೆಕ್ಯಾನಿಕ್ ಬರ್ಬರ ಹತ್ಯೆ; ಶವದ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ!
ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ.

ಹಾಸನ: ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ. ಬಿಟ್ಟಗೌಡನಹಳ್ಳಿ ಬಳಿ ಹಾಸನದ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ 22 ವರ್ಷದ ಮೆಕ್ಯಾನಿಕ್ ಕೀರ್ತಿ ಎಂಬಾತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿದ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



