ರಾಜ್ಯ

ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಉತ್ತರ ಕರ್ನಾಟಕದ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಧಾರ

ದಶಕಗಳಿಂದ ನಡೆಯುತ್ತಿರುವ ಪ್ರಾದೇಶಿಕ ನಿರ್ಲಕ್ಷ್ಯವನ್ನು ನಿಭಾಯಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ತುರ್ತು ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಉತ್ತರ ಕರ್ನಾಟಕದ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಧಾರ
ಶಾಲಿನಿ ರಜನೀಶ್
Published On :

ಬೆಳಗಾವಿ: ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆ ಕೊನೆಯ ಆದ್ಯತೆಯಾಗುತ್ತಿತ್ತು. ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ ನೀಡಬೇಕಾದ ವೇದಿಕೆಯಾಗಿದೆ.

ದಶಕಗಳಿಂದ ನಡೆಯುತ್ತಿರುವ ಪ್ರಾದೇಶಿಕ ನಿರ್ಲಕ್ಷ್ಯವನ್ನು ನಿಭಾಯಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ತುರ್ತು ಪತ್ರ ಬರೆದಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯು ಬೆಳಗಾವಿಯಲ್ಲಿ ನಡೆಯುತ್ತಿದ್ದು, ಚಳಿಗಾಲದ ಅಧಿವೇಶನ ಮಧ್ಯದಲ್ಲಿ ಮುಕ್ತಾಯಗೊಳ್ಳುವುದರಿಂದ ಫೈಲ್‌ಗಳನ್ನು ತ್ವರಿತವಾಗಿ ಪಟ್ಟಿ ಮಾಡಲು ಸೂಚಿಸಿದ್ದಾರೆ. ಉತ್ತರ ಕರ್ನಾಟಕದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಬೇಡಿಕೆಗಳು ಈ ಬಾರಿ ಅಧಿವೇಶನದಲ್ಲಿ ಈಡೇರುವ ಸಾಧ್ಯತೆಯಿದೆ.

ಸರ್ಕಾರವು ಉದ್ದೇಶಪೂರ್ವಕವಾಗಿ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳ ಸಮಸ್ಯೆಗಳಿಗೆ "ಪ್ರಾಮುಖ್ಯತೆ" ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಗಳು, ಕಾಲೇಜುಗಳು, ರಸ್ತೆಗಳು ಅಥವಾ ಮೂಲಭೂತ ನಾಗರಿಕ ಸೌಲಭ್ಯಗಳಾಗಿರಬಹುದು, ಉತ್ತರ ಕರ್ನಾಟಕದ ಮೂಲಸೌಕರ್ಯವು ಬೆಂಗಳೂರು ಮತ್ತು ಇತರ ದಕ್ಷಿಣ ಪ್ರದೇಶಗಳಲ್ಲಿನ ಸೌಲಭ್ಯಗಳಿಗಿಂತ "ತುಂಬಾ ಹಿಂದುಳಿದಿದೆ" ಎಂದು ಪ್ರಾದೇಶಿಕ ಅಸಮತೋಲನ ಆಯೋಗದ ಸಂಶೋಧನೆಗಳ ತಿಳಿಸಿವೆ.

ಹೊಸ ನಾಗರಿಕ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ವೈದ್ಯಕೀಯ ಕಾಲೇಜುಗಳು, ನೀರಾವರಿ ಯೋಜನೆಗಳು ಮತ್ತು ಕೈಗಾರಿಕಾ ಕಾರಿಡಾರ್‌ ಸೇರಿದಂತೆ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಯೋಜನೆಗಳು ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆಯಿದೆ ಎಂದು ಸಂಪುಟ ಮೂಲಗಳು ಸುಳಿವು ನೀಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.