ರಾಜ್ಯ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿತ್ತು.

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ
ಅಲೋಕ್ ಕುಮಾರ್-ಬಿ.ದಯಾನಂದ್
Published On :

ಬೆಂಗಳೂರು: 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದ್ದು ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದೆ. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಅವರನ್ನು ಡಿಜಿಪಿಯಾಗಿ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ ದಯಾನಂದ್ ಅವರನ್ನು ಈಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಅಂದು ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ 2025ರ ಮೇ ನಲ್ಲಿ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶಿಸಿತ್ತು. ಇದೀಗ 8 ತಿಂಗಳ ಹೋರಾಟಕ್ಕೆ ಜಯ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.