ದೇವನಹಳ್ಳಿ: ಕಾರು-KSRTC ಬಸ್ ಮಧ್ಯೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್‌ಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತಪಟ್ಟವರನ್ನು ಮೋಹನ್ ಕುಮಾರ್ (33ವ), ಸುಮನ್ (28ವ), ಸಾಗರ್ (23ವ) ಎಂದು ಗುರುತಿಸಲಾಗಿದೆ. ಇವರೆಲ್ಲ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳು.
ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



