ರಾಜ್ಯ

ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಬೆದರಿಕೆ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ

ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ ಹೆದರಿದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಹೊರವಲಯದ ಹೆಸರುಘಟ್ಟದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಬೆದರಿಕೆ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ
ವಿದ್ಯಾರ್ಥಿ ಜಗನ್
Published On :

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ ಹೆದರಿದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಹೊರವಲಯದ ಹೆಸರುಘಟ್ಟದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ 25 ವರ್ಷದ ಜಗನ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಗನ್ ಡೆತ್ ನೋಟ್ ನಲ್ಲಿ ಮೂರು ಮೊಬೈಲ್ ನಂಬರ್ ಗಳನ್ನು ಬರೆದಿಟ್ಟಿದ್ದನು. ಇದನ್ನು ಪರಿಶೀಲಿಸಿದ ಪೊಲೀಸರಿಗೆ ಫೇಕ್ ವಿಡಿಯೋ ಕಾಲ್ ನಲ್ಲಿ ಯುವಕ 25 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ. ಅಲ್ಲದೆ ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.