ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ?: ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ; ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.
ಜನೌಷಧಿ ಅಂಗಡಿಯವರ ಲೀಸ್ ತಿಂಗಳು ಮುಗಿದ ಹಿನ್ನೆಲೆ ಅವರಿಗೆ ಸರ್ಕಾರಿ ಆಸ್ಪತ್ರೆ ಆವರಣದಿಂದ ಹೊರಗೆ ಔಷಧಿ ಅಂಗಡಿ ಇಡಲು ಸೂಚಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಜನೌಷಧಿ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಹಣ ಪಾವತಿಸಿ ಔಷಧಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.
ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯ, 120 ಚದರ ಅಡಿ ಜಾಗದಲ್ಲಿ ಜನೌಷಧಿ ಇಟ್ಟು ಬಡವರಿಗೆ ಕಡಿಮೆ ಹಣದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ? ಜನೌಷಧಿ ಬಗ್ಗೆ ಯಾರಾದರೂ ದೂರು ಕೊಟ್ಟಿದ್ದಾರಾ? ಬಸ್ ಉಚಿತ ಮಾಡಿ ಎಂದು ತಮಗೆ ಯಾರು ಹೇಳಿದ್ದರು ಎಂದು ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿತು.
ಈ ಪ್ರಕರಣ ನ್ಯಾಯಾಲಯಕ್ಕೆ ಬಾರಬಾರದಿತ್ತು. ಜನೌಷಧಿ ಅಂಗಡಿ ಇಡಲು ಅವಕಾಶ ಕೊಡದೇ ಇದ್ದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾಣುತ್ತದೆ ಎಂದು ಅಭಿಪ್ರಾಯಪಟ್ಟು ಸರ್ಕಾರದ ಆದೇಶವನ್ನು ರದ್ದು ಮಾಡಿದೆ.
ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿದ್ದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ಹೊರಡಿಸಿತ್ತು. ಈ ನಿರ್ಧಾರವು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



