ಸುಪ್ರೀಂ ಕೋರ್ಟ್ನಲ್ಲೂ ಪ್ರಜ್ವಲ್ಗೆ ಹಿನ್ನಡೆ; ಅತ್ಯಾಚಾರ ಪ್ರಕರಣ ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ!
ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ.
ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.
ತಮ್ಮ ವಿರುದ್ಧ ಬಾಕಿ ಇರುವ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು.
ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್ ನ ಸಿಜೆಐ ಪೀಠ ತಿರಸ್ಕರಿಸಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ, ಕೆಳ ನ್ಯಾಯಾಲಯದ ಜಡ್ಜ್ ಅವರ ಅಭಿಪ್ರಾಯಗಳು, ಪೂರ್ವಾಗ್ರಹಪೀಡಿತರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಹೇಳಿದೆ.
ಪ್ರಸ್ತುತ ಕೇಸ್ ನಲ್ಲಿ ಹಾಜರುಪಡಿಸುವ ಸಾಕ್ಷ್ಯಗಳ ಆಧಾರದ ಮೇಲೆ ಜಡ್ಜ್ ತೀರ್ಪು ನೀಡಬೇಕೇ ವಿನಃ ಹಿಂದಿನ ಕೇಸ್ ತೀರ್ಪು ಆಧಾರದ ಮೇಲೆ ಅಲ್ಲ ಎಂದು ಹೇಳಿ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ನಾವು ಜಿಲ್ಲಾ ನ್ಯಾಯಾಂಗದ ನೈತಿಕತೆಯನ್ನು ಸಹ ನೋಡಬೇಕು. ಈ ವ್ಯಕ್ತಿ ಸುಪ್ರೀಂಕೋರ್ಟ್ ಗೆ ಹೋಗಿ ಜಿಲ್ಲಾ ಕೋರ್ಟ್ ವಿರುದ್ಧ ಆದೇಶ ಪಡೆದಿದ್ದಾರೆ ಎಂಬ ಸಂದೇಶ ಕಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸಿಜೆ ಹೇಳಿದ್ದಾರೆ. ಜಿಲ್ಲಾ ನ್ಯಾಯಾಂಗದ ನೈತಿಕತೆಯನ್ನು ನಾವು ಉನ್ನತ ಮಟ್ಟದಲ್ಲಿ ಇಡಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



