ರಾಜ್ಯ

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತಾ? ಡಿ.ಕೆ ಶಿವಕುಮಾರ್

ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ?

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತಾ? ಡಿ.ಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್
Published On :

ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದರು.

ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅದರಲ್ಲಿ ಯಾವ ಔತಣಕೂಟವು ಇಲ್ಲ, ಏನೂ ಇಲ್ಲ" ಎಂದು ಹೇಳಿದರು.

ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ ಎಂದು ತಿಳಿಸಿದರು.ಈ ವಿಚಾರದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ವಹಿಸಲಾಗಿದೆ. ಕೆಎಸ್ ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ" ಎಂದು ತಿಳಿಸಿದರು.

"ಈ ವಿಚಾರದಲ್ಲಿ ಕುನ್ಹಾ ಅವರ ಸಮಿತಿಯ ಶಿಫಾರಸ್ಸುಗಳನ್ನು ಗೌರವಿಸಬೇಕು. ಈ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ವಹಿಸಲಾಗಿದೆ. ಗೃಹ ಸಚಿವರು ಕೆಎಸ್ ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.