ರಾಜ್ಯ

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!

ಡಿಸೆಂಬರ್ 10 ರಂದು ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದಿರುವ ಅವರು, ಬಂಧಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!
ರೆಡ್-ಶ್ಯಾಂಕ್ಡ್ ಡೌಕ್‌
Published On :

ಬೆಂಗಳೂರು: ಅಳಿವಿನಂಚಿನಲ್ಲಿರುವ ಕೋತಿ ಪ್ರಭೇದವಾದ ಎರಡು ರೆಡ್-ಶ್ಯಾಂಕ್ಡ್ ಡೌಕ್‌ಗಳನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಲಾಗಿದೆ ಮತ್ತು ಪ್ರಾಣಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಡಿಸೆಂಬರ್ 10 ರಂದು ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದಿರುವ ಅವರು, ಬಂಧಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.

ಅಳಿವಿನಂಚಿನಲ್ಲಿರುವ ಎರಡು ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳನ್ನು 'ತನ್ನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಮರೆಮಾಡಿಕೊಂಡು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು, ಪರಿಶೀಲನೆ ನಡೆಸಲಾಯಿತು' ಎಂದು ಬೆಂಗಳೂರು ಕಸ್ಟಮ್ಸ್ 'X'ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಪ್ರಾಣಿಗಳನ್ನು ರಕ್ಷಿಸಲಾಯಿತು ಮತ್ತು ಪ್ರಯಾಣಿಕನನ್ನು ಬಂಧಿಸಲಾಯಿತು ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.