ಡಿಸೆಂಬರ್ 16ರಂದು ಸುತ್ತೂರು ಜಯಂತೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ: ಮಳವಳ್ಳಿಯಲ್ಲಿ ವ್ಯಾಪಕ ಭದ್ರತೆ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿ. 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ.
ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿ. 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಡಿ.16ರ ಮಧ್ಯಾಹ್ನ 2.10ಕ್ಕೆ ಮೈಸೂರಿನ ಏರ್ಪೋರ್ಟ್ಗೆ ಆಗಮಿಸಲಿರುವ ದ್ರೌಪದಿ ಮುರ್ಮು, ಬಳಿಕ ಹೆಲಿಕಾಪ್ಟರ್ನಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳುತ್ತಾರೆ. ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಾರೆ.
ಅಂದು ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗುವ ರಾಷ್ಟ್ರಪತಿ, ಡಿ.16ರಂದು ರಾತ್ರಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ.17ರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ತಿರುಪತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೆರಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



