17.5 ಕೋಟಿ ರೂ ವಂಚನೆ ಪ್ರಕರಣ: ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿ ಪುತ್ರನ ಹೆಸರು; NRI ದೂರು!
ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಮತ್ತು OSD ವೆಂಕಟೇಶ್ ಅವರ ಪುತ್ರ ರಜತ್ ವೆಂಕಟೇಶ್ ಹಾಗೂ ಅವರ ಉದ್ಯಮಿಗಳಾದ ಸ್ನೇಹಾ ರಾಕೇಶ್ ಮತ್ತು ರಾಬಿನ್ ಫ್ರಾನ್ಸಿಸ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು: 17.5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಪುತ್ರನ ಹೆಸರು ಕೇಳಿಬಂದಿದ್ದು, ಮುಖ್ಯಮಂತ್ರಿ ಕಾರ್ಯಾಲಯ ಇದೀಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.
ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಮತ್ತು OSD ವೆಂಕಟೇಶಯ್ಯ ಅವರ ಪುತ್ರ ರಜತ್ ವೆಂಕಟೇಶ್ ಹಾಗೂ ಅವರ ಉದ್ಯಮಿಗಳಾದ ಸ್ನೇಹಾ ರಾಕೇಶ್ ಮತ್ತು ರಾಬಿನ್ ಫ್ರಾನ್ಸಿಸ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅನಿವಾಸಿ ಭಾರತೀಯ ತೇಜಸ್ವಿ ಮರಿಯಪ್ಪ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಕಟ್ಟಡ ಖರೀದಿಸುವ ಪ್ರಸ್ತಾವನೆಯೊಂದಿಗೆ ದೂರುದಾರರನ್ನು ಸಂಪರ್ಕಿಸಿದ್ದು, ಆಸ್ತಿ ದಾಖಲೆ ಪಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡೀಲ್ ಭದ್ರಪಡಿಸಿಕೊಳ್ಳಲು ಅವರು 17.5 ಕೋಟಿ ರೂಪಾಯಿ ಮೌಲ್ಯದ ಚೆಕ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಚೆಕ್ ನ್ನು ನಗದು ಆಗಿಸಲು ಪ್ರಸ್ತುತಪಡಿಸಿದಾಗ ಸಹಿ ನಕಲಿಯಾಗಿದ್ದು, ವಹಿವಾಟು ವಿಫಲವಾಗಿದೆ.
ಪ್ರಭಾವಿ ರಾಜಕೀಯ ವ್ಯಕ್ತಿಗಳ ಸಂಪರ್ಕದ ಮೂಲಕ ನಂಬಿಕೆ ಹುಟ್ಟಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆರೋಪಿಗಳ ಪಾತ್ರವನ್ನು ತನಿಖೆಯ ಭಾಗವಾಗಿ ಪರಿಶೀಲಿಸಲಾಗುವುದು. ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



