ರಾಜ್ಯ

ಆಳಂದ ಮತಗಳ್ಳತನ ಪ್ರಕರಣ: SIT ಆರೋಪಪಟ್ಟಿ ಸತ್ಯಾಂಶಗಳಿಂದ ಕೂಡಿದೆ- ಡಿ.ಕೆ ಶಿವಕುಮಾರ್

ಈ ಪ್ರಕರಣದಲ್ಲಿ ಯಾವುದೇ ಮುಚ್ಚು ಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ, ಆರೋಪಪಟ್ಟಿ ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಸದನದಲ್ಲಿ ದನಿ ಎತ್ತಲಿದ್ದಾರೆ.

ಆಳಂದ ಮತಗಳ್ಳತನ ಪ್ರಕರಣ: SIT ಆರೋಪಪಟ್ಟಿ ಸತ್ಯಾಂಶಗಳಿಂದ ಕೂಡಿದೆ- ಡಿ.ಕೆ ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್
Published On :

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯದಲ್ಲಿ ಸಲ್ಲಿಸಿರುವ ಆರೋಪಪಟ್ಟಿ ಸತ್ಯಾಂಶಗಳಿಂದ ತುಂಬಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದೆ ಅವರು, ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತಗಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರ ವಿರುದ್ಧ ಸಲ್ಲಿಕೆಯಾಗಿರುವ ಆರೋಪಪಟ್ಟಿ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಪ್ರಕರಣದಲ್ಲಿ ಯಾವುದೇ ಮುಚ್ಚು ಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ, ಆರೋಪಪಟ್ಟಿ ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ಪ್ರಕರಣ ತನಿಖೆ ನಡೆಸಿ, ಅಧಿಕಾರಿಗಳು ಕ್ರಮ ತೆಗದುಕೊಂಡಿದ್ದಾರೆ. ಫೋನ್‌ನಲ್ಲಿ ದಾಖಲೆಗಳು ಡಿಲೀಟ್ ಆಗಿವೆ ಎಂದು ಇದೆ. ಇದರ ಬಗ್ಗೆ ವರದಿ ತರಿಸಿಕೊಂಡು ನೋಡಿ ಆ ನಂತರ ಮಾತನಾಡುತ್ತೇನೆ. ರಾಹುಲ್ ಗಾಂಧಿ ಅವರ ಸಲಹೆಯಂತೆ ಲೀಗಲ್ ಬ್ಯಾಂಕ್ ಅನ್ನು ಪ್ರತಿ ಕ್ಷೇತ್ರದಲ್ಲೂ ಪ್ರಾರಂಭ ಮಾಡಬೇಕು. ಈ ವಿಚಾರದ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.