ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ ಅಕ್ರಮ ಆಸ್ತಿ!
ರಾಜ್ಯದ ವಿವಿಧ ಭಾಗಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಅಕ್ರಮ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಆದಾಯಕ್ಕಿಂತ ಹೆಚ್ಚುವರಿಯಾಗಿ ಒಟ್ಟು 18.2 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಅಕ್ರಮ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಆದಾಯಕ್ಕಿಂತ ಹೆಚ್ಚುವರಿಯಾಗಿ ಒಟ್ಟು 18.2 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ.
ಮಂಡ್ಯದ ಜಿಲ್ಲಾ ಪಂಚಾಯತ್‌ನ ಪಂಚಾಯತ್ ರಾಜ್ ಎಂಜಿನಿಯರ್ ವಿಭಾಗದ ಕಚೇರಿ ಅಧೀಕ್ಷಕ ಬೈರೇಶ್ ವಿ.ಎಸ್, ಬೆಳಗಾವಿಯ ಕೃಷಿ ಇಲಾಖೆಯ ವಿಜಿಲೆನ್ಸ್ ಸೆಲ್‌ನ ಜಂಟಿ ನಿರ್ದೇಶಕ ರಾಜಶೇಖರ್ ಈರಪ್ಪ ಬಿಜಾಪುರ, ವಿಜಯನಗರದ ಜಿಲ್ಲಾ ಆರೋಗ್ಯ ಅಧಿಕಾರಿ ಎಲ್.ಆರ್ ಶಂಕರ್ ನಾಯಕ್ ಮತ್ತು ಶಿವಮೊಗ್ಗದ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರೂಪಲಾ ನಾಯಕ್ ಎಸ್. ವಿರುದ್ಧ ದಾಳಿ ನಡೆದಿತ್ತು. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಈ ಅಧಿಕಾರಿಗಳಿಗೆ ಸಂಬಂಧಿಸಿದ 21 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು.
ರಾಜಶೇಖರ್ ಅವರ ಬಳಿ ಅತಿ ಹೆಚ್ಚು ಆಸ್ತಿ ಇದ್ದು, ಅದರ ಮೌಲ್ಯ 6.07 ಕೋಟಿ ರೂಪಾಯಿಯದ್ದಾಗಿದೆ. ಲೋಕಾಯುಕ್ತರು ಆತನ ಬಳಿ ಮೂರು ಪ್ಲಾಟ್‌ಗಳು, ಮೂರು ಮನೆಗಳು, 19 ಲಕ್ಷ ರೂ. ಮೌಲ್ಯದ ಆಭರಣಗಳು ಮತ್ತು 38.8 ಲಕ್ಷ ರೂ. ಮೌಲ್ಯದ ವಾಹನಗಳನ್ನು ಹೊಂದಿದ್ದಾರೆ ಎಂದು ಕಂಡುಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


