ಕಾಳಸಂತೆಯಲ್ಲಿ ಸಬ್ಸಿಡಿ ಯೂರಿಯಾ ಮಾರಾಟ: ಸರ್ಕಾರದ ವಿರುದ್ಧ BJP ವಾಗ್ದಾಳಿ
ಕೇಂದ್ರ ಸರ್ಕಾರವು ರೈತರಿಗೆ ಯೂರಿಯಾವನ್ನು ಕೆಜಿಗೆ 280 ರೂ. ಸಬ್ಸಿಡಿ ಬೆಲೆಯಲ್ಲಿ ನೀಡುತ್ತಿದೆ. ಆದರೆ, ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ಪ್ರಮಾಣದ ಯೂರಿಯಾ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನೆಲಮಂಗಲ ಬಳಿ ವಶಪಡಿಸಿಕೊಂಡಿರುವ ಯೂರಿಯಾ ರಾಜ್ಯದಲ್ಲಿ ನಡೆದಿರು ಬೃಹತ್ ಯೂರಿಯಾ ಹಗರಣವನ್ನು ಬಹಿರಂಗಗೊಳ್ಳುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.
ನಮ್ಮ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾವನ್ನು ಒದಗಿಸುತ್ತಿಲ್ಲ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ಆರೋಪಿಸುತ್ತಿದೆ. ಆದರೆ, ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಬಹಿರಂಗಗೊಂಡಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರವು ರೈತರಿಗೆ ಯೂರಿಯಾವನ್ನು ಕೆಜಿಗೆ 280 ರೂ. ಸಬ್ಸಿಡಿ ಬೆಲೆಯಲ್ಲಿ ನೀಡುತ್ತಿದೆ. ಆದರೆ, ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆನೆಲಮಂಗಲ ಬಳಿ ಗೆಜ್ಜಗದಹಳ್ಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು (ಡಿಆರ್‌ಐ) ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ 190 ಯೂರಿಯಾ ಗೊಬ್ಬರವನ್ನು ಜಪ್ತಿ ಮಾಡಿ ಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 28 ಕೋಟಿ ರು. ಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ಕೇಂದ್ರದಿಂದ ಸಬ್ಸಿಡಿ ಯಲ್ಲಿ ಸಿಗುವ 45 ಕೆಜಿ ತೂಕದ ಯೂರಿಯಾ ಗೊಬ್ಬರವೊಂದರ ಚೀಲದ ಬೆಲೆ ಸಾಧಾರಣವಾಗಿ 246 ರು. ಇದೆ. ರೈತರಿಗಾಗಿ ಸಬ್ಸಿಡಿ ದರದಲ್ಲಿ ಕೊಡುವ ಈ ಯೂರಿಯಾವನ್ನು ಸಂಗ್ರಹಿಸಿ, ಅದನ್ನು 2,000ರಿಂದ 2,500 ರು.ಗೆ ಮಧ್ಯವರ್ತಿ ಗಳ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
6 ತಿಂಗಳ ಹಿಂದೆ ತಜೀರ್‌ಖಾನ್ ಯೂಸುಫ್ ಎಂಬುವರು ತಿಂಗಳಿಗೆ 40000 ರು.ಗೆ ಶೆಡ್ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾವನ್ನು ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು ಎನ್ನಲಾಗಿದೆ. ಈ ನಡುವೆ ತಮಿಳುನಾಡಿನಲ್ಲಿ ದಾಳಿ ವೇಳೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು.
ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುವ 45 ಕೆ.ಜಿ. ತೂಕದ ಯೂರಿಯಾವನ್ನು ಶೆಡ್‌ಗಳಿಗೆ ತಂದು ದಾಸ್ತಾನು ಮಾಡಲಾಗುತ್ತಿತ್ತು. ಬಳಿಕ, ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆ.ಜಿ. ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಗೋಡೌನ್ ಮಾಲೀಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



