ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು 4 ವರ್ಷದ ಬಾಲಕಿ ಸಾವು!

ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆಗಳು ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತ ಮಗುವನ್ನು ಮನುಶ್ರೀ ಎಂದು ಗುರುತಿಸಲಾಗಿದೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು 4 ವರ್ಷದ ಬಾಲಕಿ ಸಾವು!
Published On :

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆಗಳು ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತ ಮಗುವನ್ನು ಮನುಶ್ರೀ ಎಂದು ಗುರುತಿಸಲಾಗಿದೆ.

ತಾಯಿ ಮಮತಾ (30) ಮತ್ತು ಇಬ್ಬರು ಮಕ್ಕಳಾದ ಶ್ರೀಯಾನ್ (6) ಮತ್ತು ಶೇಖರ್ (5) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡ ನಿರ್ಮಾಣಕ್ಕಾಗಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಭೋರಗಿ ಗ್ರಾಮದವನ್ನು ಕರೆತರಲಾಗಿತ್ತು. ಅವರಿಗಾಗಿ ನಿರ್ಮಿಸಲಾಗಿದ್ದ ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದಿವೆ. ಮಧ್ಯಾಹ್ನ 3 ರಿಂದ 3.30ರ ನಡುವೆ ಈ ಘಟನೆ ಸಂಭವಿಸಿತ್ತು.

ಶ್ರೀನಿವಾಸುಲು ಎಂಬ ವ್ಯಕ್ತಿ ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ನಿರ್ಮಾಣ ಕಾರ್ಯಗಳನ್ನು ನಡೆಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಉಪ ಪೊಲೀಸ್ ಆಯುಕ್ತ (ವೈಟ್‌ಫೀಲ್ಡ್) ಕೆ. ಪರಶುರಾಮ್ ಹೇಳಿದ್ದಾರೆ. ಈ ಸಂಬಂಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.