ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ಕೊಡಿ: ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಒತ್ತಾಯ
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾರಣರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ಮನವಿ ಮಾಡಿದ್ದಾರೆ.

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾರಣರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಭಾರತ ರತ್ನ (Bharat Ratna) ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ತಿಪ್ಪಣ್ಣಪ್ಪ, ಕಲ್ಯಾಣ ಕರ್ನಾಟಕದ ವಿಶೇಷ ಅಭಿವೃದ್ಧಿಗಾಗಿ ಭಾರತದ ಸಂವಿಧಾನಕ್ಕೆ ಸೇರಿಸಲಾದ ಅನುಚ್ಛೇದ 371(ಜೆ) ಅವಿರೋಧಾಗಿ ಪಾಸ್ ಆಗಿದೆ. ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದಾಗ ರಾಜ್ಯಕ್ಕೆ, ದೇಶಕ್ಕೆ ಅವರ ಸೇವೆ ಅಪಾರ. ಹೀಗಾಗಿ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದರು. ಮಲ್ಲಿಕಾರ್ಜುನ ಖರ್ಗೆ ಕಲಬುರಗಿಗೆ ಇಎಸ್‌ಐ ಆಸ್ಪತ್ರೆ ತಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ರೈಲು ಇಲ್ಲದ ಭಾಗಗಳಿಗೆ ರೈಲು ತಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಖರ್ಗೆ ಅವರನ್ನು ಗೌರವಿಸಬೇಕೆಂದು ಕೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



