ರಾಜ್ಯ

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ; ಆರೋಪಿ ಬಂಧನ

ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂಬುದಾಗಿ ರಿಕಿ ಕೇಜ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಆರೋಪಿಗಳು ಕೃತ್ಯ ಎಸಗುತ್ತಿರುವ ದೃಶ್ಯಾವಳಿ ವಿಡಿಯೊಗಳನ್ನೂ ಅಪ್‌ಲೋಡ್ ಮಾಡಿದ್ದರು.

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ; ಆರೋಪಿ ಬಂಧನ
ಬಂಧಿತ ಆರೋಪಿ ಶಿವಕುಮಾರ್
Published On :

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರ ಮನೆಯ ನೀರಿನ ಸಂಪ್‌ನ ಕಬ್ಬಿಣದ ಮುಚ್ಚಳವನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಇಂದಿರಾನಗರ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ನೀಲಸಂದ್ರದ ಶಿವಕುಮಾರ್ (19) ಬಂಧಿತ ಆರೋಪಿ. ಆರೋಪಿ ಗುಜರಿ ವ್ಯಾಪಾರ ಮಾಡುತ್ತಿದ್ದ, ಕದ್ದ ಮುಚ್ಚಳವನ್ನು ರೂ.700ಕ್ಕೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ.

ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂಬುದಾಗಿ ರಿಕಿ ಕೇಜ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಆರೋಪಿಗಳು ಕೃತ್ಯ ಎಸಗುತ್ತಿರುವ ದೃಶ್ಯಾವಳಿ ವಿಡಿಯೊಗಳನ್ನೂ ಅಪ್‌ಲೋಡ್ ಮಾಡಿದ್ದರು.

ಡಿ.12ರ ಸಂಜೆ 6 ಗಂಟೆಯ ಸುಮಾರಿಗೆ ಈ ಘಟನೆ ನಡೆದಿತ್ತು. ಇಬ್ಬರು ಯುವಕರು ಬಂದು ಗೇಟ್‌ ಎದುರು ಸ್ಕೂಟರ್ ನಿಲುಗಡೆ ಮಾಡಿದ್ದರು. ಆದಾದ ಮೇಲೆ ಒಬ್ಬ ನಿಧಾನವಾಗಿ ಗೇಟ್‌ ತೆರೆದು, ಒಳಗೆ ಹೋಗಿ ಸಂಪ್‌ಗೆ ಅಳವಡಿಸಿದ್ದ ಕಬ್ಬಿಣದ ಮುಚ್ಚಳವನ್ನು ಕಳವು ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.