ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ
ಸಚಿವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಗಾಂಧಿ ಶುಕ್ರವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ, ಗಲಾಟೆ, ಗದ್ದಲಕ್ಕೆ ಕಾರಣವಾಯಿತು.
ಸಚಿವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಚರ್ಚೆ ವೇಳೆಯಲ್ಲಿ ಅಮಿತ್ ಶಾ ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ ಹೇಳಿಕೆ ಬಿಜೆಪಿ ಸದಸ್ಯರನ್ನು ಕೆರಳಿಸಿತು. ಸಚಿವರು ಕ್ಷಮೆ ಕೇಳಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಅಮಿತ್ ಶಾ ಅವರ ಹೆಸರನ್ನ ಪ್ರಸ್ತಾಪಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಿ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದರು.
ಈ ಹೇಳಿಕೆಯನ್ನು ಕಡತದಿಂದ ತೆಗೆದುಹಾಕುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರೂ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಟನೆ ನಡೆಸಿ, ಪ್ರಿಯಾಂಕಾ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ಈ ವೇಳೆ ಆಡಳಿತಾರೂಢ ಪಕ್ಷದ ಸದಸ್ಯರು ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಜೋರಾದ ಗಲಾಟೆ ನಡೆಯಿತು.
ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ನ್ನು ಶುಕ್ರವಾರ ವಿಧಾನಪರಿಷತ್ತಿನಲ್ಲಿಯೂ ಅಂಗೀಕರಿಸಲಾಯಿತು. ಗುರುವಾರ ವಿಧಾನಸಭೆಯಲ್ಲಿ ಈ ವಿಧೇಯಕ ಅಂಗೀಕಾರವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



