ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ
ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ನೆರವಾಗಲು ಸರ್ಕಾರ ಎಲ್ಲಾ ರೀತಿಯಿಂದಲೂ ಸಹಾಯಕ್ಕೆ ಮುಂದಾಗಿದೆ.

ರೈತರಿಗೆ 1 ಲೀಟರ್ ಹಾಲಿಗೆ ಸಹಾಯಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು.
ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.
ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



