ರಾಜ್ಯ

ಬಾಗಲಕೋಟೆ: ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ!

ಬಾಗಲಕೋಟೆಯ ನವನಗರದಲ್ಲಿರುವ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕ ದಂಪತಿ ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾರೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ!
Published On :

ಬಾಗಲಕೋಟೆ: ಬಾಗಲಕೋಟೆಯ ನವನಗರದಲ್ಲಿರುವ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕ ದಂಪತಿ ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾರೆ. ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕ ದಂಪತಿ ಅಕ್ಷಯ್ ಹಾಗೂ ಪತ್ನಿ ಮಾಲಿನಿ ಎಂಬುವವರು ಮನಬಂದಂತೆ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಚಿತ್ರಹಿಂಸೆ ನೀಡಿದ್ದಾರೆ.

ಶಿಕ್ಷಕರ ಕ್ರೌರ್ಯದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರ ಮೂಲದವರಾದ ಶಿಕ್ಷಕ ಅಕ್ಷಯ್ ಹಾಗೂ ಪತ್ನಿ ಮಾಲಿನಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದು, ಸಹ ಶಿಕ್ಷಕ ವಿಶಾಲ್ ಎಂಬಾತ ಕೂಡ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.

ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.