ಬೆಂಗಳೂರು: JCB ನುಗ್ಗಿಸಿದ GBA; 200ಕ್ಕೂ ಹೆಚ್ಚು ಮನೆಗಳು ನೆಲಸಮ!
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂದು ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂದು ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಿದೆ. 14 ಎಕರೆ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಈ ಕುಟುಂಬಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು, ಮನೆ ನಿರ್ಮಿಸಿಕೊಂಡಿದ್ದರೆಂದು ಅಧಿಕಾರಿಗಳು ಆರೋಪಿಸಿದ್ದಾರೆ. ಮುಖ್ಯವಾಗಿ, ಒಂದು ವೇಳೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಲ್ಲಿ, ತೆರವುಗೊಳಿಸಲು ಮೂರು ತಿಂಗಳ ಮುನ್ನವೇ ನೋಟಿಸ್ ನೀಡಬೇಕು. ಭೂಮಿಯನ್ನು ಖಾಲಿ ಮಾಡುವಂತೆ ಸೂಚಿಸಬೇಕು. ಬಳಿಕ, ನಂತರದ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿಯಮವಿದೆ. ಆದರೆ, ಫಕೀರ್ ಕಾಲೋನಿಯ ನಿವಾಸಿಗಳಿಗೆ ಈವರೆಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ಅಧಿಕಾರಿಗಳು ಏಕಾಏಕಿ ಕಾಲೋನಿಗೆ ನುಗ್ಗಿ, ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



